Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:31 - ಕನ್ನಡ ಸತ್ಯವೇದವು J.V. (BSI)

31 ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ, ಇಸ್ರಾಯೇಲ್‍ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೆಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:31
9 ತಿಳಿವುಗಳ ಹೋಲಿಕೆ  

ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.


ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.


ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ - ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷ ಮಾರ್ಪಡಿಸಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರ ಮೇಲೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು