1 ಅರಸುಗಳು 11:33 - ಕನ್ನಡ ಸತ್ಯವೇದವು J.V. (BSI)33 ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.