Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:43 - ಕನ್ನಡ ಸತ್ಯವೇದವು J.V. (BSI)

43 ಪಿತೃಗಳ ಬಳಿಗೆ ಸೇರಿದನು; ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ರೆಹಬ್ಬಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:43
24 ತಿಳಿವುಗಳ ಹೋಲಿಕೆ  

ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಸೊಲೊಮೋನನು ರೆಹಬ್ಬಾಮನನ್ನು ಪಡೆದನು. ರೆಹಬ್ಬಾಮನು ಅಬೀಯನನ್ನು ಪಡೆದನು. ಅಬೀಯನು ಆಸನನ್ನು ಪಡೆದನು.


ಸಲ್ಮೋನನು ರಾಹಾಬಳಲ್ಲಿ ಬೋವಜನನ್ನು ಪಡೆದನು. ಬೋವಜನು ರೂತಳಲ್ಲಿ ಓಬೇದನನ್ನು ಪಡೆದನು. ಓಬೇದನು ಇಷಯನನ್ನು ಪಡೆದನು.


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ಅವನು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್‍ರಾಜಶ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯನು ಅರಸನಾದನು.


ಉಜ್ಜೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು ರಾಜಕುಟುಂಬಶ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಅವನು ತೀರಿಹೋದಾಗ ಅವನನ್ನು ಯಾರೂ ಹಂಬಲಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಸೊಲೊಮೋನನ ಮಗನು ರೆಹಬ್ಬಾಮನೆಂಬವನು; ಇವನ ಮಗನು ಅಬೀಯ; ಇವನ ಮಗನು ಆಸ;


ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನಿಗೆ ಬದಲಾಗಿ ಅವನ ಮಗನಾದ ಯೋಷೀಯನು ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯ ಎಂಬವನು ಅರಸನಾದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಏಲನು ಅರಸನಾದನು.


ಅವನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಷಾಫಾಟನು ಅರಸನಾದನು.


ಅಬೀಯಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.


ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಸೊಲೊಮೋನನು ಯೆರೂಸಲೇವಿುನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಆಳಿದನಂತರ ಪಿತೃಗಳ ಬಳಿಗೆ ಸೇರಿದನು;


ಅಹಾಬನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬವನು ಅರಸನಾದನು.


ಅವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವದರಲ್ಲಿ ಜ್ಞಾನವನ್ನೂ ಪ್ರಯಾಸವನ್ನೂ ವ್ರಯಮಾಡಿದ್ದೇನೋ ಅದರ ಮೇಲೆ ದೊರೆತನ ಮಾಡುವನು. ಇದೂ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು