Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:14 - ಕನ್ನಡ ಸತ್ಯವೇದವು J.V. (BSI)

14 ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ - ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:14
20 ತಿಳಿವುಗಳ ಹೋಲಿಕೆ  

ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಶಿಷ್ಟರ ಉದ್ದೇಶ ನ್ಯಾಯ; ದುಷ್ಟರ ಆಲೋಚನೆ ಮೋಸ.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ಐಗುಪ್ತ್ಯರು ಇಸ್ರಾಯೇಲ್ಯರ ಕೈಯಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡು


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು