Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:15 - ಕನ್ನಡ ಸತ್ಯವೇದವು J.V. (BSI)

15 ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:15
27 ತಿಳಿವುಗಳ ಹೋಲಿಕೆ  

ಉಳಿದ ಜನರಿಗೂ - ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ದೈವೋತ್ತರ ಉಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಹಿಂದಿರುಗಿಹೋದರು.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂಬದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನಮಾಡಬೇಕೆಂದು ಆತನು ನಿರ್ಣಯಿಸಿದ್ದನು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಯೋಗದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮಮಾಡುವದಕ್ಕೋಸ್ಕರ ಯೇಹುವಿಗೆ ರಾಜ್ಯಾಭಿಷೇಕ ಮಾಡಿಸಿದ್ದನು.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಇಗೋ ಯೆಹೋವನು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವವೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೆ ಎಂದು ಹೇಳಿದನು.


ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ - ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದು ಬಿಡುವವು;


ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡುನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ತಿಳಿಯದೆ ಮಾಡಿದರು.


ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು.


ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ಅದಕ್ಕೆ ಲಾಬಾನನು ಬೆತೂವೇಲನೂ - ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು