1 ಅರಸುಗಳು 12:27 - ಕನ್ನಡ ಸತ್ಯವೇದವು J.V. (BSI)27 ಜನರು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಾರ್ಪಣೆಗಾಗಿ ಹೋಗುವದಾದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗೀತು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು ಅಂದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು. ಅಧ್ಯಾಯವನ್ನು ನೋಡಿ |