Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:33 - ಕನ್ನಡ ಸತ್ಯವೇದವು J.V. (BSI)

33 ಇಸ್ರಾಯೇಲ್ಯರು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಫೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಸುಡುವದಕ್ಕಾಗಿ ಅದರ ಮೆಟ್ಲುಗಳನ್ನು ಹತ್ತುತ್ತಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಎಂಟನೆಯ ತಿಂಗಳ ಹದಿನೈದನೆಯ ದಿನ ಇಸ್ರಯೇಲರು ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಛೆಯಿಂದ ಗೊತ್ತುಮಾಡಿದನು. ಆ ಸಮಯಕ್ಕೆ ತಾನೂ ಬೇತೇಲಿನ ಬಲಿಪೀಠದ ಬಳಿಗೆ ಹೋಗಿ ಧೂಪಾರತಿ ಎತ್ತಲು ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:33
11 ತಿಳಿವುಗಳ ಹೋಲಿಕೆ  

ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ


ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು.


ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು.


ಅರಸನು ಹಿಂದಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು ಅದರ ಸಮೀಪಕ್ಕೆ ಹೋಗಿ


ಅವರು ಯೆಹೋವನ ಭಕ್ತರಾಗಿ ಕನಿಷ್ಠಜನರಲ್ಲಿ ಕೆಲವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.


ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು