Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:6 - ಕನ್ನಡ ಸತ್ಯವೇದವು J.V. (BSI)

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೊಲೊಮೋನನ ಕಾಲದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತಿದ್ದ ಕೆಲವು ಹಿರಿಯರು ಅಲ್ಲಿದ್ದರು. ರಾಜನಾದ ರೆಹಬ್ಬಾಮನು ಅವರಿಗೆ, “ನಾನು ಈ ಜನರಿಗೆ ಉತ್ತರ ಹೇಳಲೇಬೇಕು. ನಾನು ಏನು ಹೇಳಲಿ? ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:6
10 ತಿಳಿವುಗಳ ಹೋಲಿಕೆ  

ಹೆಚ್ಚು ದಿನಗಳವರು ಮಾತಾಡಲಿ, ಬಹಳ ವರುಷದವರು ಜ್ಞಾನೋಪದೇಶ ಮಾಡಲಿ ಅಂದುಕೊಂಡಿದ್ದೆನು.


ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದೀರ್ಘಾಯುವೂ ವಿವೇಕವೂ ಒಂದೇನೋ?


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ಅವನ ಮುಖ್ಯ ಉದ್ಯೋಗಸ್ಥರು - ಚಾದೋಕನ ಮಗನಾದ ಅಜರ್ಯನು ಯಾಜಕನು;


ಆಮೇಲೆ ಅಬ್ಷಾಲೋಮನು - ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ ಎಂದು ಹೇಳಿ


ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -


ಸೊಲೊಮೋನರಾಜನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದನು.


ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು