1 ಅರಸುಗಳು 13:19 - ಕನ್ನಡ ಸತ್ಯವೇದವು J.V. (BSI)19 ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಆ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.