Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:20 - ಕನ್ನಡ ಸತ್ಯವೇದವು J.V. (BSI)

20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:20
9 ತಿಳಿವುಗಳ ಹೋಲಿಕೆ  

ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ; ಆದರೆ ತಾನು ಆ ವರುಷದ ಮಹಾಯಾಜಕನಾಗಿದ್ದದರಿಂದ ದೇವಪ್ರೇರಣೆಯಿಂದ ಮಾತಾಡಿ ಯೇಸು ಆ ಜನಕ್ಕೋಸ್ಕರ ಸಾಯುವದಕ್ಕಿದ್ದನೆಂದು ಹೇಳಿದನು.


ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.


ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.


ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಹೀಗೆ ಹೀಗೆ ಹೇಳಬೇಕು ಅಂದನು.


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿಹೋಗಿ ಹೀಗೆ ಹೀಗೆ ಹೇಳಬೇಕು ಎಂದು ಆಜ್ಞಾಪಿಸಿದನು.


ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು