Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:28 - ಕನ್ನಡ ಸತ್ಯವೇದವು J.V. (BSI)

28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪ್ರವಾದಿಯು ಹೋಗಿ ರಸ್ತೆಯ ಮೇಲೆ ಬಿದ್ದಿರುವ ದೇಹವನ್ನು ಕಂಡನು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ಇನ್ನೂ ನಿಂತಿದ್ದವು. ಸಿಂಹವು ಆ ದೇಹವನ್ನು ತಿಂದಿರಲಿಲ್ಲ ಮತ್ತು ಕತ್ತೆಗೆ ತೊಂದರೆಯನ್ನೂ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:28
14 ತಿಳಿವುಗಳ ಹೋಲಿಕೆ  

ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.


ಹೀಗಾಗಲು ರಾಜಾಜ್ಞೆಯು ಖಂಡಿತವಾಗಿದದ್ದರಿಂದಲೂ ಆವಿಗೆಯ ಕಾವು ಅತಿತೀಕ್ಷ್ಣವಾಗಿದ್ದದರಿಂದಲೂ ಅಗ್ನಿಜ್ವಾಲೆಯು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಎತ್ತಿಹಾಕಿದವರನ್ನೇ ಸಂಹರಿಸಿತು.


ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವದು ಎಂದು ಅಪ್ಪಣೆಕೊಟ್ಟೆನು.


ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ, ಮಾಂಸ ಇವುಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು; ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.


ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆದು ಬಿಡದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.


ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಕತ್ತೆಗೆ ತಡಿಹಾಕಬೇಕೆಂದು ಮಕ್ಕಳಿಗೆ ಆಜ್ಞಾಪಿಸಿದನು; ಅವರು ಹಾಕಿದರು.


ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಳಿ ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು