1 ಅರಸುಗಳು 13:31 - ಕನ್ನಡ ಸತ್ಯವೇದವು J.V. (BSI)31 ಅನಂತರ ಅವನು ತನ್ನ ಮಕ್ಕಳಿಗೆ - ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ಆ ದೈವಭಕ್ತನ ಶವ ಇರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹೀಗೆ ಪ್ರವಾದಿಯು ಆ ದೇಹವನ್ನು ಸಮಾಧಿ ಮಾಡಿದನು. ನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ, ನನ್ನನ್ನು ಅದೇ ಸ್ಮಶಾನದಲ್ಲಿ ಸಮಾಧಿಮಾಡಿ. ಅವನ ಪಕ್ಕದಲ್ಲೇ ನನ್ನ ಮೂಳೆಗಳನ್ನೂ ಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ವೃದ್ಧ ಪ್ರವಾದಿಯು ಅವನನ್ನು ಹೂಳಿಟ್ಟ ತರುವಾಯ, ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ದೇವರ ಮನುಷ್ಯನನ್ನು ಹೂಳಿಟ್ಟ ಸಮಾಧಿಯಲ್ಲಿ ನನ್ನನ್ನು ಹೂಳಿಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ. ಅಧ್ಯಾಯವನ್ನು ನೋಡಿ |