1 ಅರಸುಗಳು 13:33 - ಕನ್ನಡ ಸತ್ಯವೇದವು J.V. (BSI)33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು. ಅಧ್ಯಾಯವನ್ನು ನೋಡಿ |