Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:6 - ಕನ್ನಡ ಸತ್ಯವೇದವು J.V. (BSI)

6 ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:6
25 ತಿಳಿವುಗಳ ಹೋಲಿಕೆ  

ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.


ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.


ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ - ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು; ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.


ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.


ಅದಕ್ಕೆ ಫರೋಹನು - ಒಳ್ಳೇದು, ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಮಾಡುವಂತೆ ನಿಮಗೆ ಅಪ್ಪಣೆ ಕೊಡುತ್ತೇನೆ; ಆದರೆ ದೂರ ಹೋಗಕೂಡದು; ನನಗೋಸ್ಕರ ಪ್ರಾರ್ಥನೆಮಾಡಿರಿ ಅಂದನು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು.


ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು.


ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.


ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ; ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.


ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.


ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು