Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:7 - ಕನ್ನಡ ಸತ್ಯವೇದವು J.V. (BSI)

7 ಆಗ ಅರಸನು ಅವನಿಗೆ - ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಬಲಹೊಂದು; ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:7
10 ತಿಳಿವುಗಳ ಹೋಲಿಕೆ  

ಅನಂತರ ಅವನು ತನ್ನ ಪರಿವಾರದವರೊಡನೆ ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ ಅವನ ಮುಂದೆ ನಿಂತು - ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವದೇ ಇಲ್ಲವೆಂಬದು ಈಗ ನನಗೆ ಗೊತ್ತಾಯಿತು; ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು ಎಂದು ಹೇಳಿದನು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ - ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.


ಈ ಬೀದಿಯಲ್ಲಿ ರಾತ್ರಿ ಕಳೆಯಬೇಡ, ನನ್ನ ಮನೆಗೆ ಬಾ ಎಂದು ಹೇಳಿ ಅವನನ್ನು ಕರಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.


ಮತ್ತು ಮಾನೋಹನು ಯೆಹೋವನ ದೂತನನ್ನು - ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೂ ದಯವಿಟ್ಟು ಇಲ್ಲೇ ನಿಲ್ಲಬೇಕೆಂದು ಬೇಡಿಕೊಳ್ಳಲು


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಬೆಳಿಸಬಹುದು ಎನ್ನಲು ಅವರು - ನೀನು ಹೇಳಿದಂತೆ ಮಾಡಬಹುದು ಅಂದರು.


ನೀನು ಹತ್ತು ರೊಟ್ಟಿಗಳನ್ನೂ ವಿುಠಾಯಿಯನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವದೆಂದು ಅವನು ತಿಳಿಸುವನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು