Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:10 - ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು; ಅವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:10
25 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ


ಯೆಹೋವನು ನಿನ್ನನ್ನು ಕುರಿತು - ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಕಡಿದುಬಿಡುವೆನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಆಹಾ, ನಿಮ್ಮ ಬೀಜವನ್ನು [ಬೆಳೆಯದಂತೆ]ಖಂಡಿಸುವೆನು; ನಿಮ್ಮ ಮುಖದ ಮೇಲೆ ಮಲವನ್ನು, ನಿಮ್ಮ ಹಬ್ಬದ ಪಶುಗಳ ಮಲವನ್ನು ಚೆಲ್ಲಿಬಿಡುವೆನು; ನೀವು ಆ ಮಲದ ತಿಪ್ಪೆಯ ಪಾಲಾಗುವಿರಿ.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು;


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ.


ತನ್ನ ಮಲದ ಹಾಗೆ ನಿತ್ಯನಾಶನವನ್ನು ಹೊಂದುವನು, ಅವನನ್ನು ಕಂಡವರು ಕೂಡ ಅವನೆಲ್ಲಿಯೋ ಅನ್ನುವರು.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು.


ಆಕೆಯ ಶವವು ಆ ಹೊಲಕ್ಕೆ ಗೊಬ್ಬರವಾಗುವದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವದು ಎಂಬದಾಗಿ ಯೆಹೋವನು ತಿಷ್ಬೀಯನೂ ತನ್ನ ಸೇವಕನೂ ಆದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು ಅಂದನು.


ಇವನು ಸಿಂಹಾಸನದ ಮೇಲೆ ಕೂತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧು ವಿುತ್ರರನ್ನೂ ಸಂಹರಿಸಿದನು; ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.


ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಾಯೇಲ್‍ದೇವರಾದ ಯೆಹೋವನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿದ್ದಿಲ್ಲ ಎಂದು ಹೇಳಿ


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನ್ನ ಮನೆಗೂ ಆಗುವದು.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು