Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:16
36 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದರಿಂದ


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


(ಇದು ಪಾಪಕ್ಕೆ ಕಾರಣವಾಯಿತು.) ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಇಸ್ರಾಯೇಲ್ಯರು ಆರೋನನ ಕೈಯಿಂದ ಆ ಬಸವನನ್ನು ಮಾಡಿಸಿಕೊಂಡದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದದರಿಂದ ಹೀಗಾಯಿತು.


ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ನನಗೆ ಕೋಪವನ್ನೆಬ್ಬಿಸಿದದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವದು ಅನ್ನುತ್ತಾನೆ.


ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ಇವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ಯರ ದೇವರಾದ ಯೆಹೋವನನ್ನು ರೇಗಿಸಿದನು.


ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಜೀವದಿಂದಿರುವವರೆಗೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು


ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.


ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್‍ರಾಜನಾದ ಆಹಾಜನ ನಿವಿುತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು