1 ಅರಸುಗಳು 14:21 - ಕನ್ನಡ ಸತ್ಯವೇದವು J.V. (BSI)21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಾಲ್ವತ್ತೊಂದು ವರುಷದವನಾಗಿದ್ದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ. ಅಧ್ಯಾಯವನ್ನು ನೋಡಿ |