Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:22 - ಕನ್ನಡ ಸತ್ಯವೇದವು J.V. (BSI)

22 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:22
19 ತಿಳಿವುಗಳ ಹೋಲಿಕೆ  

ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಅವನು ಯೆಹೋವನನ್ನು ಅನುಸರಿಸುವದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.


ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ


ಇವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿವಿುತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ.


ಯೆಹೂದ್ಯರ ಅರಸನಾದ ಮನಸ್ಸೆಯು ಮುಂಚೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡಿಸಿದದರಿಂದಲೂ ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದದರಿಂದಲೂ


ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು