Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:23 - ಕನ್ನಡ ಸತ್ಯವೇದವು J.V. (BSI)

23 ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:23
29 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.


ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನೂ ಎತ್ತರವಾದ ಗುಡ್ಡಗಳನ್ನೂ ಕಂಡಾಗೆಲ್ಲಾ ಅವರ ಯಜ್ಞವೇದಿಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ಜ್ಞಾಪಿಸಿಕೊಳ್ಳುವರು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೂ ಎಲ್ಲಾ ಹಸುರು ಮರಗಳ ಕೆಳಗೂ ಯಜ್ಞಗಳನ್ನೂ ಧೂಪಗಳನ್ನೂ ಸಮರ್ಪಿಸಿದನು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.


ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


[ಆದದರಿಂದ] ನೀವು ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಬಿಡಬೇಕು.


ದೇವದಾಸ ದೇವದಾಸಿಯರನ್ನು ದೇಶದಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ - ಇಸ್ರಾಯೇಲ್ಯರ ದೇವರು ಬೆಟ್ಟಗಳ ದೇವರಾಗಿರುವದರಿಂದ ಅವರು ನಮ್ಮನ್ನು ಸೊಲಿಸಿದರು; ನಾವು ಅವರೊಡನೆ ಬೈಲಿನಲ್ಲಿ ಯುದ್ಧಮಾಡುವದಾದರೆ ಹೇಗೂ ಜಯಹೊಂದುವೆವು.


ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಯೆಹೂದ್ಯರು ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲ್ಯರ ಪದ್ಧತಿಯನ್ನು ಅನುಸರಿಸಿದದರಿಂದ


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ ಲೇವಿಯರಲ್ಲದ ಕನಿಷ್ಠ ಜನರನ್ನೂ ಯಾಜಕರನ್ನಾಗಿ ನೇವಿುಸಿದನು.


ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೆಯೂ ಎಲ್ಲಾ ಹಸುರು ಮರಗಳ ಕೆಳಗೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವದರಿಂದಲೂ ಪೂಜಾಸ್ಥಳಗಳು ಪಾಳು ಬೀಳುವದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳುಪಾಳಾಗುವವು, ನಿಮ್ಮ ಬೊಂಬೆಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮಸೂರ್ಯಸ್ತಂಭಗಳು ಕಡಿಯಲ್ಪಡುವವು, ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವವು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು