1 ಅರಸುಗಳು 14:24 - ಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನನುಸರಿಸುತ್ತಿರುವ ದೇವದಾಸ ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ನಡಿಸುವವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿ |