Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:27 - ಕನ್ನಡ ಸತ್ಯವೇದವು J.V. (BSI)

27 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:27
11 ತಿಳಿವುಗಳ ಹೋಲಿಕೆ  

ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.


ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಆದರೆ ಯೆಹೋವನು ಅವನಿಗೆ - ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆಂದೂ ಆಕೆಗೆ ಇಂಥಿಂಥ ಉತ್ತರ ಕೊಡಬೇಕೆಂದೂ ತಿಳಿಸಿದ್ದನು.


ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.


ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನೂ ಕುದುರೆಗಳನ್ನೂ ತೆಗೆದುಕೊಂಡು ತನ್ನ ಮುಂದೆ ಮೈಗಾವಲಾಗಿ ಓಡುವದಕ್ಕೆ ಐವತ್ತು ಮಂದಿಯನ್ನು ನೇವಿುಸಿದನು.


ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಲಲ್ಲೇ ಮಲಗಿಕೊಂಡನು.


ಅರಸನು ಯೆಹೋವನ ಆಲಯಕ್ಕೆ ಹೋಗುವಾಗೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು; ಅಲ್ಲಿಂದ ತಿರಿಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.


ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ


ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟು ಶತಾಧಿಪತಿಗಳು, ಕಾರಿ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು, ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಕಾವಲುದಂಡಿನವರ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು