Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:11 - ಕನ್ನಡ ಸತ್ಯವೇದವು J.V. (BSI)

11 ಇವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಸನು ತನ್ನ ಪೂರ್ವಿಕನಾದ ದಾವೀದನು ಮಾಡಿದಂತೆ, ಯೆಹೋವನು ಇಚ್ಛಿಸಿದ ಕಾರ್ಯಗಳನ್ನೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:11
15 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ಇಸ್ರಾಯೇಲ್‍ಪ್ರಾಂತದಲ್ಲಿದ್ದ ಪೂಜಾಸ್ಥಳಗಳು ತೆಗೆದುಹಾಕಲ್ಪಡದಿದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ತನ್ನ ತಂದೆಯು ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಇವನು ಸೇವಿಸಲಿಲ್ಲ.


ದೇವದಾಸ ದೇವದಾಸಿಯರನ್ನು ದೇಶದಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ಇವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ ಪೂಜಾಸ್ಥಳಗಳನ್ನು ಹಾಳು ಮಾಡಲಿಲ್ಲ; ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಸುಡುತ್ತಾ ಇದ್ದರು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು; ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.


ಇವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.


ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು.


ಇವನು ತಪ್ಪದೆ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು