Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:13 - ಕನ್ನಡ ಸತ್ಯವೇದವು J.V. (BSI)

13 ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:13
25 ತಿಳಿವುಗಳ ಹೋಲಿಕೆ  

ಜನರು ಮಾಡಿಸಿಕೊಂಡಿದ್ದ ಬಸವನನ್ನು ಅವನು ಹಿಡಿದು ಬೆಂಕಿಯಿಂದ ಸುಟ್ಟು ಅರೆದು ಪುಡಿಪುಡಿಮಾಡಿ ನೀರಿನ ಮೇಲೆ ಚೆಲ್ಲಿ ಇಸ್ರಾಯೇಲ್ಯರಿಗೆ ಆ ನೀರನ್ನು ಕುಡಿಸಿದನು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ಇವನು ಯೆರೂಸಲೇವಿುನಲ್ಲಿ ನಾಲ್ವತ್ತೊಂದು ವರುಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಇವನ ತಾಯಿ.


ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಣವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್‍ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.


ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಆಕೆಯು ಅದೋನೀಯನಿಗಾಗಿ ಮಾತಾಡುವದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕೂತು ರಾಜಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕೂತುಕೊಂಡು -


ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು