Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:19 - ಕನ್ನಡ ಸತ್ಯವೇದವು J.V. (BSI)

19 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:19
10 ತಿಳಿವುಗಳ ಹೋಲಿಕೆ  

ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಕಳುಹಿಸಿದನು.


(ಗಿಬ್ಯೋನ್ಯರು ಇಸ್ರಾಯೇಲ್‍ಕುಲಗಳಿಗೆ ಸೇರಿದವರಲ್ಲ; ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವದಿಲ್ಲವೆಂದು ಪ್ರಮಾಣ ಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದಕುಲಗಳ ಮೇಲೆ ತನಗಿದ್ದ ಅಭಿಮಾನದ ದೆಸೆಯಿಂದ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.)


ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು