1 ಅರಸುಗಳು 15:22 - ಕನ್ನಡ ಸತ್ಯವೇದವು J.V. (BSI)22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ವಿುಚ್ಬೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು ಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |