Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:23 - ಕನ್ನಡ ಸತ್ಯವೇದವು J.V. (BSI)

23 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಇವುಗಳೂ ಅವನ ಇತರ ಕ್ರಿಯೆಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಸನ ಉಳಿದ ಚರಿತ್ರೆ, ಅವನ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಹಾಗು ಅವನ ಇತರ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗ ತಗಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:23
7 ತಿಳಿವುಗಳ ಹೋಲಿಕೆ  

ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.


ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು