1 ಅರಸುಗಳು 15:27 - ಕನ್ನಡ ಸತ್ಯವೇದವು J.V. (BSI)27 ಇವನು ಇಸ್ರಾಯೇಲ್ಯರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರೋಧವಾಗಿ ಒಳಸಂಚು ಮಾಡಿ ಇವನನ್ನು ಕೊಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿ |