Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:1 - ಕನ್ನಡ ಸತ್ಯವೇದವು J.V. (BSI)

1 ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಸರ್ವೇಶ್ವರಸ್ವಾಮಿ ಹನಾನೀಯನ ಮಗ ಯೇಹುವಿನ ಮುಖಾಂತರ ಬಾಷನಿಗೆ ಹೀಗೆ ಹೇಳಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಷನಿಗೆ ವಿರೋಧವಾಗಿ ಹನಾನೀಯ ಮಗ ಯೇಹುವಿಗೆ ಯೆಹೋವ ದೇವರ ವಾಕ್ಯ ಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:1
7 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನನ್ನು ರೇಗಿಸಿ ಆತನ ದೃಷ್ಟಿಯಲ್ಲಿ ದ್ರೋಹಿಯಾದದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದದರಿಂದಲೂ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೂ ಅವನ ಕುಟುಂಬಕ್ಕೂ ದುರ್ಗತಿಯನ್ನು ಮುಂತಿಳಿಸಿದನು.


ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲ್ಯರ ಅರಸನಾಗಿ ತಿರ್ಚದಲ್ಲಿದ್ದುಕೊಂಡು ಇಪ್ಪತ್ತನಾಲ್ಕು ವರುಷ ಆಳಿದನು.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು