Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:13 - ಕನ್ನಡ ಸತ್ಯವೇದವು J.V. (BSI)

13 ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:13
15 ತಿಳಿವುಗಳ ಹೋಲಿಕೆ  

ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಆಹಾ, ಇವರೆಲ್ಲಾ ಮಾಯೆ, ಇವರ ಕಾರ್ಯಗಳು ಶೂನ್ಯ, ಇವರ ಎರಕದ ಬೊಂಬೆಗಳು ಗಾಳಿಯೇ, ಹಾಳೇ!


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಇವನಿಗೂ ಇಸ್ರಾಯೇಲ್ಯರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು