Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:28 - ಕನ್ನಡ ಸತ್ಯವೇದವು J.V. (BSI)

28 ಒಮ್ರಿಯು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನಿಗೆ ಬದಲಾಗಿ ಇವನ ಮಗನಾದ ಅಹಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಒಮ್ರಿ ಸತ್ತು ಪಿತೃಗಳ ಬಳಿಗೆ ಸೇರಿದಾಗ ಇವನ ಶವವನ್ನು ಸಮಾರಿಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನ ಸ್ಥಾನದಲ್ಲಿ ಇವನ ಮಗ ಅಹಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಒಮ್ರಿಯು ಸತ್ತುಹೋದನು; ಅವನನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು, ಅವನ ನಂತರ ಅವನ ಮಗನಾದ ಅಹಾಬನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಒಮ್ರಿಯು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಸಮಾರ್ಯ ಪಟ್ಟಣದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:28
6 ತಿಳಿವುಗಳ ಹೋಲಿಕೆ  

ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಇವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರುಷ ಆಳಿದನು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಏಲನು ಅರಸನಾದನು.


ಸಮಾರ್ಯಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತುಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.


ಇವನು ಪಟ್ಟಕ್ಕೆ ಬಂದಾಗ ನಾಲ್ವತ್ತೆರಡು ವರುಷದವನಾಗಿದ್ದನು; ಇವನು ಯೆರೂಸಲೇವಿುನಲ್ಲಿ ಒಂದು ವರುಷ ಆಳಿದನು; ಒವ್ರಿುಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು