Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:29 - ಕನ್ನಡ ಸತ್ಯವೇದವು J.V. (BSI)

29 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಯೇಲರ ಅರಸನಾದನು; ಸಮಾರಿಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೂದದ ಅರಸನಾದ ಆಸನ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಾಯೇಲಿನ ಮೇಲೆ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:29
11 ತಿಳಿವುಗಳ ಹೋಲಿಕೆ  

ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಒಮ್ರಿಯು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನಿಗೆ ಬದಲಾಗಿ ಇವನ ಮಗನಾದ ಅಹಾಬನು ಅರಸನಾದನು.


ಇವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ಆತನು ಅವನಿಗೆ - ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಎರಡು ಪಕ್ಷಗಳುಂಟಾದವು; ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೊಂದನೆಯ ವರುಷದಲ್ಲಿ ಒಮ್ರಿಯು ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು. ಆರು ವರುಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.


ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದಪಟ್ಟಣಗಳ ಮೇಲೆ ಬಿದ್ದು ಮೂರು ಸಾವಿರ ಜನರನ್ನು ಕೊಂದು ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್‍ದೇವತೆಯ ವಿಷಯದಲ್ಲಿ ದೋಷಿಯಾದಾಗ ಸತ್ತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು