1 ಅರಸುಗಳು 16:31 - ಕನ್ನಡ ಸತ್ಯವೇದವು J.V. (BSI)31 ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |