Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:7 - ಕನ್ನಡ ಸತ್ಯವೇದವು J.V. (BSI)

7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನನ್ನು ರೇಗಿಸಿ ಆತನ ದೃಷ್ಟಿಯಲ್ಲಿ ದ್ರೋಹಿಯಾದದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದದರಿಂದಲೂ ಯೆಹೋವನು ಹನಾನೀಯ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೂ ಅವನ ಕುಟುಂಬಕ್ಕೂ ದುರ್ಗತಿಯನ್ನು ಮುಂತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:7
15 ತಿಳಿವುಗಳ ಹೋಲಿಕೆ  

ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;


ಇವರ ದೇಶವು ವಿಗ್ರಹಗಳಿಂದಲೂ ತುಂಬಿದೆ, ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ಅವರ ವಿಗ್ರಹಗಳೋ ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ಯೆಹೋವನು ಇಸ್ರಾಯೇಲ್ಯರ ಮೇಲೆ ಬೇರೊಬ್ಬ ಅರಸನನ್ನು ನೇವಿುಸುವನು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು