Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:11 - ಕನ್ನಡ ಸತ್ಯವೇದವು J.V. (BSI)

11 ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:11
9 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಬೆಳಿಸಬಹುದು ಎನ್ನಲು ಅವರು - ನೀನು ಹೇಳಿದಂತೆ ಮಾಡಬಹುದು ಅಂದರು.


ಅವನು ಅಲ್ಲಿಂದ ಹೊರಟು ಚಾರೆಪ್ತದ ಊರುಬಾಗಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕೂಗಿ - ದಯವಿಟ್ಟು ಕುಡಿಯುವದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ ಎಂದು ಹೇಳಿದನು.


ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು