1 ಅರಸುಗಳು 17:12 - ಕನ್ನಡ ಸತ್ಯವೇದವು J.V. (BSI)12 ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು. ಅಧ್ಯಾಯವನ್ನು ನೋಡಿ |