Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:14 - ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:14
11 ತಿಳಿವುಗಳ ಹೋಲಿಕೆ  

ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ಅನಂತರ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ;


ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು - ಇಸ್ರಾಯೇಲ್‍ದೇವರಾದ ಯೆಹೋವನ ಮಾತನ್ನು ಕೇಳು - ಆತನು ನಿನಗೆ - ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲ್ಯರ ಅರಸನಾಗುವದಕ್ಕೆ ಅಭಿಷೇಕಿಸಿದ್ದೇನೆ.


ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.


ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆತನು ಊಟಕ್ಕೆ ಕೂತಿರುವಾಗ ಆ ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು