Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:15 - ಕನ್ನಡ ಸತ್ಯವೇದವು J.V. (BSI)

15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:15
13 ತಿಳಿವುಗಳ ಹೋಲಿಕೆ  

ಅಬ್ರಹಾಮನು ಪರಿಶೋಧಿತನಾಗಿ ನಂಬಿಕೆಯಿಂದಲೇ ಇಸಾಕನನ್ನು ಸಮರ್ಪಿಸಿದನು. ಇಸಾಕನು ಅವನ ಏಕಪುತ್ರನಾಗಿದ್ದರೂ ಮತ್ತು ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರೆಂದು ದೇವರು ಅವನಿಗೆ ಹೇಳಿದ್ದರೂ ಆ ವಾಗ್ದಾನಗಳನ್ನು ಹೊಂದಿದ ಅವನು ಆ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕಿದ್ದನು.


ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ನಿಮಗೆ ನಿಜವಾಗಿ ಹೇಳುತ್ತೇನೆ, ಬೊಕ್ಕಸದಲ್ಲಿ ಹಾಕಿದವರೆಲ್ಲರಲ್ಲಿ ಈ ಬಡ ವಿಧವೆ ಹೆಚ್ಚು ಹಾಕಿದ್ದಾಳೆ.


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.


ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು.


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು