1 ಅರಸುಗಳು 17:17 - ಕನ್ನಡ ಸತ್ಯವೇದವು J.V. (BSI)17 ಕೆಲವು ದಿನಗಳಾದನಂತರ ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು; ಹುಡುಗನಿಗೆ ರೋಗವು ಹೆಚ್ಚಾದದರಿಂದ ಉಸಿರಾಡುವುದು ನಿಂತು ಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸ್ವಲ್ಪಕಾಲದ ತರುವಾಯ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;