1 ಅರಸುಗಳು 17:18 - ಕನ್ನಡ ಸತ್ಯವೇದವು J.V. (BSI)18 ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು. ಅಧ್ಯಾಯವನ್ನು ನೋಡಿ |
ಯೋಷೀಯನು ಅವನಿಗೆ ವಿರೋಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ - ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ. ನನ್ನನ್ನು ಮುಂದರಿಸಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ಕೈಯೆತ್ತುವದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು ಎಂದು ಹೇಳಿಸಿದನು.
ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.