Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:6 - ಕನ್ನಡ ಸತ್ಯವೇದವು J.V. (BSI)

6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ, ಮಾಂಸ ಇವುಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು; ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದುಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:6
25 ತಿಳಿವುಗಳ ಹೋಲಿಕೆ  

ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಆಗ ಅವನು - ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಚ್ಚಲಾರದೆ ಹೋದರು.


ಯೆಹೋವನು ಅವನಿಗೆ - ಯೆಹೋವನ ಕೈ ಮೋಟುಗೈಯೋ; ನನ್ನ ಮಾತು ನೆರವೇರುತ್ತದೋ ಇಲ್ಲವೋ ಈಗ ನೀನು ನೋಡುವಿ ಎಂದು ಹೇಳಿದನು.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.


ಅವನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವಕ್ಕಿರುವ ಕೆರೀತ್‍ಹಳ್ಳದಲ್ಲಿ ವಾಸಿಸಿದನು.


ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿವಸಗಳಾದನಂತರ ಹಳ್ಳವು ಬತ್ತಿಹೋಯಿತು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು.


ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು