Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:14 - ಕನ್ನಡ ಸತ್ಯವೇದವು J.V. (BSI)

14 ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂಬದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತೀ; ಅವನು ನನ್ನನ್ನು ಕೊಲ್ಲುವನಲ್ಲವೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗಿದ್ದರೂ ತಾವು ನನಗೆ, ‘ಎಲೀಯನು ಬಂದಿದ್ದಾನೆಂಬುದಾಗಿ’ ನಿನ್ನ ಒಡೆಯನಿಗೆ ತಿಳಿಸು,” ಎಂದು ಆಜ್ಞಾಪಿಸುತ್ತೀರಿ; ಅವನು ನನ್ನನ್ನು ಕೊಂದೇ ಕೊಲ್ಲುವನಲ್ಲವೇ?’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:14
4 ತಿಳಿವುಗಳ ಹೋಲಿಕೆ  

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಆಗ ಎಲೀಯನು ಅವನಿಗೆ - ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು ಅಂದನು.


ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು