Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:2 - ಕನ್ನಡ ಸತ್ಯವೇದವು J.V. (BSI)

2 ಎಲೀಯನು ಅಹಾಬನನ್ನು ನೋಡುವದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹುಘೋರವಾಗಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು. ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:2
16 ತಿಳಿವುಗಳ ಹೋಲಿಕೆ  

ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.


ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೇಕಳುಹಿಸಿದನು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.


ಅಹಜ್ಯನು ತಾನು ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.


ಹಗಲೆಲ್ಲಾ ನನ್ನ ಮಾತುಗಳಿಗೆ ಅಪಾರ್ಥ ಮಾಡುತ್ತಾರೆ; ಅವರು ಬಗೆಯುವದೆಲ್ಲ ನನಗೆ ಕೇಡೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು