Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:20 - ಕನ್ನಡ ಸತ್ಯವೇದವು J.V. (BSI)

20 ಅಹಾಬನು ಇಸ್ರಾಯೇಲ್ಯರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಸ್ರೇಲರೆಲ್ಲರನ್ನು ಮತ್ತು ಆ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಅಹಾಬನು ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:20
7 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ ಎಂದು ಆಜ್ಞಾಪಿಸಿದನು.


ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಎಲೀಷನು ಅಲ್ಲಿಂದ ಕರ್ಮೆಲ್‍ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರನ್ನು - ನಾನು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ನಾನು ಸಮಾರ್ಯದ ಪ್ರವಾದಿಗಳಲ್ಲಿ ಅಯುಕ್ತವನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗತಪ್ಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು