Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:24 - ಕನ್ನಡ ಸತ್ಯವೇದವು J.V. (BSI)

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ - ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:24
14 ತಿಳಿವುಗಳ ಹೋಲಿಕೆ  

ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ


ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.


ಸೊಲೊಮೋನನು ಪ್ರಾರ್ಥಿಸುವದನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿಬಿದ್ದು ಸರ್ವಾಂಗ ಹೋಮದ್ರವ್ಯಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು, ಯೆಹೋವನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.


ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.


ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.


ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.


ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.


ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.


ಅದಕ್ಕೆ ಶಿಮ್ಮಿಯು - ಒಳ್ಳೇದು; ನನ್ನ ಒಡೆಯನೂ ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು ಎಂದು ಉತ್ತರಕೊಟ್ಟು ಬಹುದಿನಗಳವರೆಗೂ ಯೆರೂಸಲೇವಿುನಲ್ಲೆ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು