Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:26 - ಕನ್ನಡ ಸತ್ಯವೇದವು J.V. (BSI)

26 ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:26
21 ತಿಳಿವುಗಳ ಹೋಲಿಕೆ  

ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.


ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ.


ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಉಳಿದ ಭಾಗವನ್ನು ತನ್ನ ದೇವರನ್ನಾಗಿ ಬೊಂಬೆ ಕೆತ್ತಿ ಅದಕ್ಕೆ ಎರಗಿ ಅಡ್ಡಬಿದ್ದು - ನೀನೇ ನನ್ನ ದೇವರು, ನನ್ನನ್ನು ರಕ್ಷಿಸು ಎಂದು ಪ್ರಾರ್ಥಿಸುವನು.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ - ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು.


ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.


ಆಗ ನಾವಿಕರು ಹೆದರಿ ತಮ್ಮ ತಮ್ಮ ದೇವರುಗಳಿಗೆ ಮೊರೆಯಿಟ್ಟು ತಮ್ಮ ಕಷ್ಟವು ಕಡಿಮೆಯಾಗುವ ಹಾಗೆ ಹಡಗಿನ ಸಾಮಾನುಗಳನ್ನು ಸಮುದ್ರಕ್ಕೆ ಬಿಸಾಟುಬಿಟ್ಟರು. ಇಷ್ಟರೊಳಗೆ ಯೋನನು ಹಡಗಿನ ಒಳಭಾಗಕ್ಕೆ ಇಳಿದು ಮಲಗಿಕೊಂಡಿದ್ದನು; ಗಾಢನಿದ್ರೆ ಹತ್ತಿತ್ತು.


ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಲು ದೇಶದಲ್ಲೆಲ್ಲಾ ದುರ್ವಾಸನೆ ತುಂಬಿತು.


ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವದನ್ನು ಕಂಡು ಅದನ್ನು ಎತ್ತಿ ತಿರಿಗಿ ಅದರ ಸ್ಥಳದಲ್ಲಿಟ್ಟರು.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು