Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:28 - ಕನ್ನಡ ಸತ್ಯವೇದವು J.V. (BSI)

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:28
9 ತಿಳಿವುಗಳ ಹೋಲಿಕೆ  

ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ಅವನು ನಿತ್ಯ ರಾತ್ರಿಹಗಲು ಸಮಾಧಿಯ ಗವಿಗಳಲ್ಲಿಯೂ ಗುಡ್ಡಗಳಲ್ಲಿಯೂ ಆರ್ಭಟಿಸುತ್ತಾ ಕಲ್ಲುಗಳಿಂದ ತನ್ನನ್ನು ಕಡಿದುಕೊಳ್ಳುತ್ತಾ ಇದ್ದನು.


ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು.


ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.


ಉಳಿದ ಭಾಗವನ್ನು ತನ್ನ ದೇವರನ್ನಾಗಿ ಬೊಂಬೆ ಕೆತ್ತಿ ಅದಕ್ಕೆ ಎರಗಿ ಅಡ್ಡಬಿದ್ದು - ನೀನೇ ನನ್ನ ದೇವರು, ನನ್ನನ್ನು ರಕ್ಷಿಸು ಎಂದು ಪ್ರಾರ್ಥಿಸುವನು.


ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಮತ್ತೊಬ್ಬನು ಅವನನ್ನು - ನಿನ್ನ ಎದೆಯ ಮೇಲಿನ ಈ ಗಾಯಗಳೇನು ಎಂದು ಕೇಳಿದರೆ ಅವನು - ವಿುತ್ರರ ಮನೆಯಲ್ಲಿ ನನಗಾದ ಗಾಯಗಳು ಎಂದುತ್ತರ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು