Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:29 - ಕನ್ನಡ ಸತ್ಯವೇದವು J.V. (BSI)

29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:29
19 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.


ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.


ಅವುಗಳಲ್ಲಿ ಒಂದನ್ನು ಪ್ರಾತಃಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ನನ್ನ ಪ್ರಾರ್ಥನೆಯು ಧೂಪದಂತೆಯೂ ನಾನು ಕೈಯೆತ್ತುವದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಮೋವಾಬ್ಯರು ಸನ್ನಿಧಿಗೆ ಸೇರಿ ದಿಣ್ಣೆಯಲ್ಲಿನ ಪೂಜೆಯಿಂದ ಬಹು ಆಯಾಸಗೊಂಡು ಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಪ್ರಾರ್ಥನೆಯು ಸಫಲವಾಗದು.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಲು ದೇಶದಲ್ಲೆಲ್ಲಾ ದುರ್ವಾಸನೆ ತುಂಬಿತು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಅವರ ವಿಗ್ರಹಗಳೋ ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು