Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:32 - ಕನ್ನಡ ಸತ್ಯವೇದವು J.V. (BSI)

32 ಯೆಹೋವನ ಹೆಸರಿಗೋಸ್ಕರ ಒಂದು ವೇದಿಯನ್ನು ಕಟ್ಟಿಸಿ ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ ಕಾಲುವೆಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಈ ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:32
11 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಮರುದಿವಸ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.


ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ನೀರು ವೇದಿಯ ಸುತ್ತಲೂ ಹರಿಯಿತು; ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು