1 ಅರಸುಗಳು 18:40 - ಕನ್ನಡ ಸತ್ಯವೇದವು J.V. (BSI)40 ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.